ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೋಡೆತ್ತುಗಳು ಅಲ್ಲ ಕಚ್ಚಾಡುವ ಚಿರತೆಗಳು ಎಂದು ಸಚಿವ ಶ್ರೀರಾಮುಲು ವಾಗ್ಧಾಳಿ ನಡೆಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀರಾಮುಲು, ಸಿಎಂ ಹುದ್ದೆಯನ್ನು ತೆಗೆದುಕೊಳ್ಳಲು ಭಾರೀ ಲೆಕ್ಕಾಚಾರ ನಡೆಸುತ್ತಿದೆ.
ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದೆ. ಹಿಂಬಾಗಿಲಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬೀಳಿಸಿಕೊಂಡು ನಮಗೆ ಅಧಿಕಾರ ಹಸ್ತಾಂತರ ಮಾಡಿದರು ಎಂದು ಕಿಡಿಕಾರಿದರು.
ನಮ್ಮ ಪಕ್ಷ ಯಾವುದೇ ಸಮುದಾಯಗಳನ್ನು ತಿರಸ್ಕಾರ ಮಾಡುವುದಿಲ್ಲ, ದೇಶದಲ್ಲಿ ಕಾಂಗ್ರೆಸ್ ತಿರಸ್ಕರಿಸಿದಂತೆಯೇ ರಾಜ್ಯದ ಜನರು ಕೂಡ ಕಾಂಗ್ರೆಸ್ ದೂರ ಇಡುತ್ತಾರೆ ಎಂದರು.