ಶಿವಸೇನೆ ವಕ್ತಾರ ಸಂಜಯ್​ ರಾವತ್​ಗೆ ಬೆಳಗಾವಿ ಕೋರ್ಟ್​ನಿಂದ ಸಮನ್ಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪದ ಮೇಲೆ ಶಿವಸೇನೆ ವಕ್ತಾರ, ರಾಜ್ಯಸಭೆ ಸದಸ್ಯ ಸಂಜಯ್ ರಾವತ್‌ಗೆ ಬೆಳಗಾವಿ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯವು ಸಮನ್ಸ್​ ಜಾರಿ ಮಾಡಿದೆ.

ಸಂಜಯ್ ರಾವತ್‌ಗೆ ಡಿಸೆಂಬರ್ 1ಕ್ಕೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, 2018ರ ಮೇ 12ರಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸಮನ್ಸ್​ ಜಾರಿಯಾಗಿದೆ.

ಪ್ರಚೋದನಾತ್ಮಕ ಭಾಷಣ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!