ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ವಯಸ್ಸಿನ ಬಾಲಕಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ವಾಹನ ಚಲಾಯಿಸಲು ಅವಕಾಶ ನೀಡಿದ ಕಾರಣಕ್ಕಾಗಿ ಬಾಲಕಿಯ ತಾಯಿಗೆ ಬಂಟ್ವಾಳ ಸಿವಿಲ್ ಜಡ್ಜ್ ಮತ್ತು ಜೆಎಂಎಪ್ ಸಿ ನ್ಯಾಯಾಲಯ 26 ಸಾ.ರೂ.ದಂಡ ವಿಧಿಸಿರುವ ಅಪರೂಪದ ಪ್ರಸಂಗ ನಡೆದಿದೆ.
ಕೆಲ ಸಮಯದ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿ ಕಾನೂನು ಬಾಹಿರವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಸಿದ್ದಕಟ್ಟೆಯಲ್ಲಿ ಅತೀ ವೇಗ ಹಾಗೂ ಅಜಾಗರುಕತೆಯಿಂದ ಬಂದ ಕಾರುಡಿಕ್ಕಿ ಹೊಡೆದಿತ್ತು. ಪರಿಣಾಮ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಬಾಲಕಿಗೆ ಗಾಯವಾಗಿತ್ತು.
ಬಂಟ್ವಾಳ ಟ್ರಾಫಿಕ್ ಪೊಲೀಸರು ಕಾನೂನು ಬಾಹಿರವಾಗಿ ದ್ವಿಚಕ್ರ ವಾಹನ ಚಲಾಯಿಸಿದ ಬಾಲಕನಿಗೆ ನೋಟೀಸ್ ಜಾರಿ ಮಾಡಿದ್ದರು.ಇದರ ವಿಚಾರಣೆ ನಡೆಸಿದ ಬಂಟ್ವಾಳ ನ್ಯಾಯಾಲಯ ಬಾಲಕಿಯ ತಾಯಿ ಯಶೋಧ ಅವರಿಗೆ 26 ಸಾ.ರೂ. ದಂಡ ಪಾವತಿಸುವಂತೆ ನೋಟೀಸ್ ಜಾರಿ ಮಾಡಿದೆ.ಈ ದಂಡದ ಮೊತ್ತವನ್ನು ಅವರು ನ್ಯಾಯಾಲಯಕ್ಕೆ ಪಾವತಿಸಿದ್ದಾರೆ.
ಟ್ರಾಫಿಕ್ ಎ.ಎಸ್.ಐ.ವಿಜಯ್ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದರು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ