ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಬಯೋಟೆಕ್‌ನ ಇನ್‌ಕೊವ್ಯಾಕ್ ಲಸಿಕೆಯನ್ನು ಕೋವಿಡ್ ತುರ್ತು ಸಂದರ್ಭದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬಳಸಲು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ ಅನುಮೋದನೆ ನೀಡಿದೆ.
ಇದು ಜಗತ್ತಿನ ಮೊದಲ ಸೂಜಿ ಮುಕ್ತ ಲಸಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ತುರ್ತು ಸಂದರ್ಭಗಳಲ್ಲಿ ಮೂಗಿಗೆ ಹನಿಗಳ ಮೂಲಕ ನೀಡಲಾಗುತ್ತಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಭಾರತ್ ಬಯೋಟೆಕ್, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿದ್ದು, ೧,೨ ಮತ್ತು ೩ ಹಂತಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಈ ಲಸಿಕೆಗೆ ಅನುಮೋದನೆ ಸಿಕ್ಕಿರುವುದು ಜಾಗತಿಕ ಮಟ್ಟದಲ್ಲಿ ಕಂಪನಿಯ ಹೊಸ ಸಾಧನೆಯನ್ನು ತೋರಿಸುತ್ತದೆ ಎಂದು ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ