ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಜನಪ್ರಿಯ ಸಿನಿ ಕಲಾವಿದರಾದ ವಸಿಷ್ಠ ಹಾಗೂ ಹರಿಪ್ರಿಯ ಇನ್ನೇನು ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿದೆ.
ಈ ಬಗ್ಗೆ ಜೋಡಿ ಸ್ಪಷ್ಟನೆ ನೀಡಿಲ್ಲ. ಆದರೆ ಇತ್ತೀಚೆಗಷ್ಟೇ ಹರಿಪ್ರಿಯಾ ಹಾಗೂ ವಸಿಷ್ಠ ಏರ್‌ಪೋರ್ಟ್‌ನಲ್ಲಿ ಕಾಣಿಸಿದ್ದು, ಕೈ ಕೈ ಹಿಡಿದು ಹೆಜ್ಜೆ ಹಾಕಿದ್ದಾರೆ. ಡಿಸೆಂಬರ್ ಅಂತ್ಯದಲ್ಲಿ ಇಬ್ಬರ ನಿಶ್ಚಿತಾರ್ಥ ನಡೆಯಲಿದ್ದು, ಶಾಪಿಂಗ್‌ಗಾಗಿ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಈ ಸುದ್ದಿ ನಿಜವೋ ಅಥವಾ ಸುಳ್ಳೋ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕಿದೆ.