ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ದಾಟಿದ ಆರೋಪದಲ್ಲಿ 24 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ವಶಕ್ಕೆ ಪಡೆದಿದೆ. ಈ ಘಟನೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ನಡೆದಿದೆ.
ಮೀನುಗಾರರಿಂದ ಐದು ಟ್ರಾಲರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವರನ್ನು ಕಂಕಸಂತುರೈ ಬಂದರಿಗೆ ಕರೆತರಲಾಗಿದೆ.
ಮಂಗಳವಾರ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ, ಶ್ರೀಲಂಕಾ ಕರಾವಳಿ ಕಾವಲುಪಡೆ ಹಾಗೂ ನೌಕಾಪಡೆ ಜಂಟಿ ಕಾರ್ಯಾಚರಣೆಯಲ್ಲಿ ಮೀನುಗಾಋನ್ನು ಬಂಧಿಸಲಾಗಿದೆ.ಮುಂದಿನ ಕ್ರಮಕ್ಕಾಗಿ ಅವರನ್ನು ನಿರ್ದೇಶಕರಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ ಎಂದಿದೆ.
ಘಟನೆಗೆ ಸಂಬಂಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕೇಂದ್ರಕ್ಕೆ ಮಾಹಿತಿ ನೀಡಿದ್ದು, ಬಂಧಿತ ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.