ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡಿದ್ದ ದಿಲ್ಲಿಯ ಬುಲಂದ್ ಶಹರ್‌ನಲ್ಲಿ ನಡೆದಿದ್ದ ಶ್ರದ್ಧಾ ವಾಕರ್ ಬರ್ಬರ ಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ನಾರ್ಕೋ ಪರೀಕ್ಷೆ ನಡೆಸಲು ದೆಹಲಿ ಕೋರ್ಟ್ ಮಂಗಳವಾರ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ. ಮೂಲಗಳ ಮಾಹಿತಿ ಪ್ರಕಾರ ಡಿ.1 ರಂದು ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಆರೋಪಿಯ ನಾರ್ಕೋ ಪರೀಕ್ಷೆ ನಡೆಯಲಿದೆ.
ಡಿ.1 ಹಾಗೂ ಡಿ.5 ರಂದು ಆರೋಪಿ ಅಪ್ತಾಬ್‌ನನ್ನು ರೋಹಿಣಿಯಲ್ಲಿರುವ ಎಫ್‌ಎಸ್‌ಎಲ್‌ಗೆ ಕರೆದೊಯ್ಯಲು ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದರು. ಇದೀಗ ನ್ಯಾಯಾಲಯ ಅನುಮತಿ ನೀಡಿದೆ ಎಂದು ಅಫ್ತಾಬ್ ಪರ ವಕೀಲರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಆರೋಪಿಯನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣದ ತನಿಖೆಗೆ ಇನ್ನಷ್ಟು ಮಾಹಿತಿ ಸಂಗ್ರಹದ ಅವಶ್ಯಕತೆಯಿದ್ದು, ಹೀಗಾಗಿ ಅಫ್ತಾಬ್‌ನನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಅಫ್ತಾಬ್ ಪೂನಾವಾಲಾ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್ ಅವರನ್ನು ಕತ್ತು ಹಿಸುಕಿ ಕೊಂದು ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಆರೋಪ ಎದುರಿಸುತ್ತಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ