ಹೊಸದಿಗಂತ ಡಿಜಿಟಲ್ ಡೆಸ್ಕ್
2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪ ಎದುರಿಸುತ್ತಿರುವ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
1991 ರ ಉಪಶಮನ ನೀತಿಯ ಅಡಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರ ಎಲ್ಲಾ 11 ಮಂದಿಯನ್ನು ಇತ್ತಿಚೆಗೆ ಬಿಡುಗಡೆ ಮಾಡಿತ್ತು. ಗುಜರಾತ್ನಲ್ಲಿ 2002 ರಲ್ಲಿ ನಡೆದ ಗಲಭೆಗಳ ಸಮಯದಲ್ಲಿ 21 ವರ್ಷ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಆರೋಪಿಗಳ ಮೇಲಿದೆ. ಈ ವೇಳೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಒಂಬತ್ತು ಸದಸ್ಯರನ್ನು ಕೊಂದುಹಾಕಲಾಗಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ