ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ಯುವಕನೊಬ್ಬ ವಿದೇಶಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ಲೈವ್ ಸ್ಟ್ರೀಮ್ ಆಗಿದೆ. ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ದಕ್ಷಿಣ ಕೊರಿಯಾದ ಯೂಟ್ಯೂಬರ್ ಮೈಯೋಚಿ ಮುಂಬೈಗೆ ಭೇಟಿ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಲೈವ್ ಸ್ಟ್ರೀಮಿಂಗ್ ವೇಳೆ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಆಕೆಯ ಬಳಿ ಬಂದು ಬೈಕ್ ನಲ್ಲಿ ಲಿಫ್ಟ್ ಕೊಡುವುದಾಗಿ ಹೇಳಿ ತನ್ನೊಂದಿಗೆ ಬರುವಂತೆ ಎಳೆದಾಡಿದ್ದಾನೆ. ಆಕೆ ಒಪ್ಪದಿದ್ದರೂ ಆಕೆಯ ಕೈ ಹಿಡಿದು ಬಲವಂತವಾಗಿ ಕರೆದುಕೊಂಡು ಹೋಗಲು ಯತ್ನಿಸಿದ.
ಆ ಯುವತಿ ಇದಕ್ಕೆ ಒಪ್ಪದೆ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಆಕೆಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯ ವಿಡಿಯೋ ಲೈವ್ ಸ್ಟ್ರೀಮಿಂಗ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಆ ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮುಂಬೈ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಘಟನೆ ಕುರಿತು ಮಾಹಿತಿ ನೀಡುವಂತೆ ಪೊಲೀಸರು ಯುವತಿಯನ್ನು ಕೋರಿದ್ದಾರೆ. ಇದಕ್ಕೆ ಯುವತಿ ಪ್ರತಿಕ್ರಿಯಿಸಿದ್ದು, ಘಟನೆಯ ವಿವರ ಬಹಿರಂಗಪಡಿಸಲು ಸಿದ್ಧ ಎಂದರು.
@MumbaiPolice A streamer from Korea was harassed by these boys in Khar last night while she was live streaming in front of a 1000+ people. This is disgusting and some action needs to be taken against them. This cannot go unpunished. pic.twitter.com/WuUEzfxTju
— Aditya (@Beaver_R6) November 30, 2022