ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಉದ್ಯಮ ಗುರಿಯಾಗಿಸಿ ಹೊಸ ಕಠಿಣ ಕಾನೂನು ಪರಿಚಯಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ಇದೇ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ʻಆರೋಗ್ಯ ಭದ್ರತೆಯಿಂದ ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025ʼ ಮಸೂದೆಯನ್ನ 20250 ಮಂಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ಮಸೂದೆಯ ಅನ್ವಯ ಗುಟ್ಕಾ, ಪಾನ್ ಮಸಾಲಾ ಹಾಗೂ ಇತರ ತಂಬಾಕು ಆಧರಿತ ಉತ್ಪನ್ನಗಳನ್ನು ಉತ್ಪಾದಿಸಲು ಬಳಸುವ ಯಂತ್ರೋಪಕರಣಗಳು ಮತ್ತು ಉತ್ಪಾದನಾ ಘಟಕಗಳ ಮೇಲೆ ವಿಶೇಷ ಸೆಸ್ ವಿಧಿಸಲಾಗುತ್ತದೆ. ಹೊಸ ಮಸೂದೆಯ ಅನ್ವಯ, ಕಾರ್ಖಾನೆಯು ಎಷ್ಟು ಉತ್ಪಾದಿಸುತ್ತದೆ ಎಂಬುದರ ಮೇಲೆ ಅಲ್ಲ, ಕಾರ್ಖಾನೆ ಯಂತ್ರಗಳ ಉತ್ಪಾದನಾ ಸಾಮರ್ಥ್ಯದ ಮೇಲೆ ಸೆಸ್ ಲೆಕ್ಕಾಚಾರ ಮಾಡಲಾಗುತ್ತದೆ. ಇನ್ನೂ ಕೈಯಿಂದಲೇ ತಯಾರಿಸುವ ಉತ್ಪನ್ನಗಳಿಗೆ ಸ್ಥಿರ ಮಾಸಿಕ ಸೆಸ್ ವಿಧಿಸಬಹುದಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಿಗಳ ಪ್ರಕಾರ, ಕೇಂದ್ರ ಸರ್ಕಾರವು ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗಾಗಿ ಹೊಸ ಆದಾಯ ಸಂಗ್ರಹಿಸುವ ಉದ್ದೇಶದಿಂದ ಈ ಮದೂಸೆಯನ್ನು ಪರಿಚಯಿಸಲು ಮುಂದಾಗಿದೆ ಎಂದು ಹೇಳಲಾಗ್ತಿದೆ.

