ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಚಾಪ್ಟರ್ 2(KGF 2) ಸಿನಿಮಾದ ಹಾಡು ಬಳಕೆ ಕುರಿತು ಕಾಂಗ್ರೆಸ್ ವಿರುದ್ಧ ಎಂಆರ್ಟಿ ಮ್ಯೂಸಿಕ್(MRT Music) ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದು ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ ಕೆಜಿಎಫ್ ಸಿನಿಮಾದ ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್ ಮುಚ್ಚಳಿಕೆ ನೀಡಿತ್ತು. ಆದರೆ ಈ ಹಾಡನ್ನು ಇನ್ನೂ ತೆಗೆದಿಲ್ಲ ಎಂದು ಆರೋಪಿಸಿ ಎಂಆರ್ಟಿ ಮ್ಯೂಸಿಕ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ.