ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧ ಸೆಕ್ಯೂರಿಟಿ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ಧನಂಜಯ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ ಧನಂಜಯ್ ಕಳೆದ ಒಂದು ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು.2010ರ ಬ್ಯಾಚ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಧನಂಜಯ್, ಆರು ತಿಂಗಳ ಹಿಂದಷ್ಟೇ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ್ದರು.
ಹಲಸೂರುಗೇಟ್, ಇಂದಿರಾನಗರ ಠಾಣೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದರು.
ಕ್ಯಾನ್ಸರ್ಪೀಡಿತರಾದ್ದರಿಂದ ಕಳೆದ ಕೆಲ ತಿಂಗಳುಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.