ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಮೊದಲು ರಿಷಭ್ ಪಂತ್ ರನ್ನು ಸರಣಿಯಿಂದ ಬಿಡುಗಡೆ ಮಾಡಿದ ಬಿಸಿಸಿಐ: ಕಾರಣ ಇಲ್ಲಿದೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ತಂಡ ಪ್ರಕಟಿಸಲು ಕೆಲವೇ ಗಂಟೆಗಳಿರುವಾಗ ಭಾರತ ತಂಡದಿಂದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಬಿಡುಗಡೆ ಮಾಡಿ ಬಿಸಿಸಿಐ ಪ್ರಕಟಿಸಿದೆ.
ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೆ ನೀಡಿದ್ದು, ”ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚನೆ ನಡೆಸಿ ರಿಷಬ್ ಪಂತ್ ಅವರನ್ನು ಏಕದಿನ ತಂಡದಿಂದ ಬಿಡುಗಡೆ ಮಾಡಲಾಗಿದೆ. ಅವರು ಟೆಸ್ಟ್ ಸರಣಿಗೆ ಮುಂಚಿತವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ. ಅವರ ಬದಲಿಗೆ ಯಾವುದೇ ಆಟಗಾರನನ್ನು ಕಳುಹಿಸುವುದಿಲ್ಲ. ಜೊತೆಗೆ ಮೊದಲ ಏಕದಿನ ಆಯ್ಕೆಗೆ ಅಕ್ಷರ್ ಪಟೇಲ್ ಲಭ್ಯವಿಲ್ಲ,” ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.
ಸತತ ವೈಫಲ್ಯ ಅನುಭವಿಸುತ್ತಿರುವ ಪಂತ್ ಗೆ ಭಾರತ ತಂಡದಲ್ಲಿ ಸ್ಥಾನವು ಭಾರಿ ಚರ್ಚೆಯ ವಿಷಯವಾಗಿದೆ. ಜುಲೈನಲ್ಲಿ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿ ಭಾರತವನ್ನು ಗೆಲ್ಲಿಸಿದ ನಂತರ, ಪಂತ್ ಒಂದೇ ಒಂದು ಅರ್ಧಶತಕವನ್ನು ಗಳಿಸಲು ವಿಫಲರಾಗಿದ್ದಾರೆ. ಅವರು ತಮ್ಮ ಇತ್ತೀಚಿನ ಏಕದಿನ ಇನ್ನಿಂಗ್ಸ್ ಗಳಲ್ಲಿ 14, 17, 20*, 27, 3, 6, 6 ಮತ್ತು 11 ಗಳನ್ನಷ್ಟೇ ಗಳಿಸಿ ತಡಕಾಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಹಾಗೂ ಟೀ 20 ಸರಣಿಯಲ್ಲಿ, ಪಂತ್ ನಾಲ್ಕು ಇನ್ನಿಂಗ್ಸ್‌ಗಳಿಂದ 42 ರನ್ ಗಳಿಸುವ ಮೂಲಕ ಕಳಪೆ ಫಾರ್ಮ್‌ ಮುಂದುವರೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!