ಗುಜರಾತ್‌ ಚುನಾವಣೆ: ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುಜರಾತ್‌ ವಿಧಾನಸಬಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ ನಡೆಯಲಿದ್ದು, ಈ ಹಿನ್ನೆಲೆ ಪ್ರಧಾನಿ ಮೋದಿಯವರು ಇಂದು ಅಹಮದಾಬಾದ್ ನಲ್ಲಿರುವ ತಾಯಿಯನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರು, ಇಲ್ಲಿಂದ ನೇರವಾಗಿ ಗಾಂಧಿನಗರದಲ್ಲಿರುವ ತಮ್ಮ ನಿವಾಸದಲ್ಲಿ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿದರು.

ನಾಳೆ ಅಹಮದಾಬಾದ್‌ನಲ್ಲಿ ಪ್ರಧಾನಿ ಮತದಾನ ಮಾಡಲಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ಮೋದಿ ಹಲವು ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!