Tuesday, December 2, 2025

ಟೀಮ್ ಇಂಡಿಯಾ ಸರಣಿ ವಶಕ್ಕೆ ಒಂದೇ ಹೆಜ್ಜೆ! ರಾಯ್‌ಪುರ ಕದನಕ್ಕೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಕದನದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ರಾಂಚಿಯ ಜೆಎಸ್‌ಸಿಎ ಸ್ಟೇಡಿಯಂನಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ, ಮಾಜಿ ನಾಯಕ ವಿರಾಟ್ ಕೊಹ್ಲಿ (135 ರನ್) ಅವರ ಆಕರ್ಷಕ ಶತಕದ ನೆರವಿನಿಂದ ಭಾರತ ತಂಡವು ನಿಗದಿತ 50 ಓವರ್‌ಗಳಲ್ಲಿ ಬೃಹತ್ ಮೊತ್ತವಾದ 349 ರನ್‌ಗಳನ್ನು ಕಲೆಹಾಕಿತ್ತು.

ಈ ಸವಾಲಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಕೊನೆಯವರೆಗೂ ಹೋರಾಟ ನಡೆಸಿತಾದರೂ, ಕೇವಲ 332 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 17 ರನ್‌ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ಸಾಧಿಸಿದೆ.

ಈ ಗೆಲುವಿನೊಂದಿಗೆ ಭಾರತ ತಂಡವು ಸರಣಿಯನ್ನು ವಶಪಡಿಸಿಕೊಳ್ಳಲು ಕೇವಲ ಒಂದು ಗೆಲುವಿನ ಅವಶ್ಯಕತೆಯಿದೆ. ಡಿಸೆಂಬರ್ 3 ರಂದು ರಾಯ್‌ಪುರದ ಎಸ್‌ವಿಎನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಟೀಮ್ ಇಂಡಿಯಾ ಈ ಪಂದ್ಯವನ್ನು ಗೆದ್ದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

ಅತ್ತ, ದಕ್ಷಿಣ ಆಫ್ರಿಕಾ ತಂಡವು ಸರಣಿ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಈ ದ್ವಿತೀಯ ಪಂದ್ಯದಲ್ಲಿ ಗೆಲ್ಲಲೇಬೇಕು.

ಪಂದ್ಯ ಆರಂಭ: ಮಧ್ಯಾಹ್ನ 1:30 PM

ಟಾಸ್ ಪ್ರಕ್ರಿಯೆ: ಮಧ್ಯಾಹ್ನ 1:00 PM

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಜಿಯೋ ಹಾಟ್ ಸ್ಟಾರ್ ಆ್ಯಪ್/ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

error: Content is protected !!