ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ಇಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಈಗಾಗಲೇ ಮತದಾನ ಆರಂಭವಾಗಿದೆ.
ಅಹಮದಾಬಾದ್, ವಡೋದರಾ, ಗಾಂಧಿನಗರ ಮತ್ತಿತರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ 61 ಪಕ್ಷಗಳ 833 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಇಂದು 2.5 ಕೋಟಿ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ.
Urging all those who are voting in Phase 2 of the Gujarat elections, particularly the young voters and women voters to vote in large numbers. I will be casting my vote in Ahmedabad at around 9 AM.
— Narendra Modi (@narendramodi) December 5, 2022
ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ತಮ್ಮ ಮತ ಚಲಾಯಿಸಲಿದ್ದಾರೆ. ಚುನಾವಣಾ ಆಯೋಗ 14,975 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇದಕ್ಕಾಗಿ 1.13 ಲಕ್ಷ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಿದೆ.