ಹೊಸದಿಗಂತ ಡಿಜಿಟಲ್ ಡೆಸ್ಕ್
ಗುಜರಾತ್ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ತಮ್ಮ ಹಕ್ಕನ್ನು ಚಲಾಯಿಸಿದರು.
ಗಾಂಧೀನಗರ ಸಮೀಪದ ರೇಸನ್ ಗ್ರಾಮದ ಮತಗಟ್ಟೆಯಲ್ಲಿ ಮೋದಿ ತಾಯಿ ಬಂದು ಮತ ಚಲಾಯಿಸಿದರು.
ಜೂನ್ನಲ್ಲಿ 100ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರ ತಾಯಿ, ತಮ್ಮ ಕಿರಿಯ ಮಗ ಪಂಕಜ್ ಮೋದಿಯೊಂದಿಗೆ ಗಾಂಧಿನಗರ ನಗರದ ರೇಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಪಂಕಜ್ ಮೋದಿ ಮತ್ತು ಕುಟುಂಬದ ಇತರೆ ಸದಸ್ಯರ ಸಹಾಯದಿಂದ ಮೋದಿ ತಾಯಿ ಗಾಲಿಕುರ್ಚಿಯಲ್ಲಿ ಮತಗಟ್ಟೆಗೆ ತಲುಪಿ ಮತದಾನ ಮಾಡಿದರು.
ನಿನ್ನೆ ಮತದಾನಕ್ಕೂ ಮುನ್ನಾದಿನ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.