ಹೊಸದಿಗಂತ ವರದಿ,ಹಾವೇರಿ:
ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಪಕ್ಷಾತೀತವಾಗಿ ಭಾಗವಹಿಸುವ ಮಾದರಿ ಸಮ್ಮೇಳನಕ್ಕೆ ಶ್ರಮಿಸಬೇಕು ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧ್ಯಕ್ಷ ಹಾಗೂ ಶಾಸಕ ನೆಹರು ಓಲೇಕಾರ ಹೇಳಿದರು.
ನಗರದ ಪಿ.ಬಿ ರಸ್ತೆಯ ಅಜ್ಜಯ್ಯನ ದೇವಸ್ಥಾನ ಮುಂಭಾಗದ ವಿಶಾಲವಾದ ಜಾಗೆಯಲ್ಲಿ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ಸೌಲಭ್ಯ ನೀಡುತ್ತಿದ್ದಾರೆ. ರಸ್ತೆಗಳ ಅಭಿವೃದ್ಧಿಗೂ ರೂ.೨೦ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತ್ತೊಮ್ಮೆ ಕ್ರಿಯಾಯೋಜನೆ ತಯಾರಿಸಿದಾಗ ಅಂದಾಜು ರೂ.೨೭ ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ, ಅನುದಾನ ನೀಡುವ ಭರವಸೆ ನೀಡಿದ್ದಾರೆ. ಉತ್ತಮ ಕಾರ್ಯಕ್ರಮವನ್ನು ಮಾಡುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಬಹಳ ವರ್ಷಹಳ ಬಳಿಕ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಹಾವೇರಿ ಜಿಲ್ಲೆಯ ಜನತೆಗೆ ಮುಕ್ತ ಅವಕಾಶ ಸಿಕ್ಕಿದೆ. ಈ ಸಮ್ಮೇಳನಕ್ಕೆ ರಾಜ್ಯ, ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು, ಸಾಹಿತ್ಯಾಸಕ್ತರು ಆಗಮಿಸಲಿದ್ದು, ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಹೆಚ್ಚಿನ ಸಮಯವನ್ನು ಸಮ್ಮೇಳನದ ಕಾರ್ಯಚಟುವಟಿಕೆಗಳಿಗೆ ನೀಡಿ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಹರಸೂರ ಬಣ್ಣದ ಮಠ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಗುರುಸಿದ್ದ ಸ್ವಾಮೀಜಿ, ಕರಜಗಿ ಗೌರಿಮಠದ ಶಿವಯೋಗಿ ಶಿವಚಾರ್ಯ ಸ್ವಾಮೀಜಿ, ನೆಗಳೂರ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಿಪ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಶಿವರಾಜ ಸಜ್ಜನರ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಜಿಲ್ಲಾಧಿಕಾರಿ ರಘುನಂದನಮೂರ್ತಿ, ಜಿ.ಪಂ ಸಿಇಓ ಮಹಮ್ಮದ ರೋಷನ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳೇಗಡ್ಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಕಸಾಪ ತಾಲೂಕಾ ಅಧ್ಯಕ್ಷ ವೈ.ಬಿ.ಆಲದಕಟ್ಟಿ ಇತರರು ಉಪಸ್ಥಿತರಿದ್ದರು.