ಹೊಸದಿಗಂತ ಡಿಜಿಟಲ್ ಡೆಸ್ಕ್
ತೆರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಸೇರಿದ ಸಂಸ್ಥೆಗಳಿಗೆ ನ್ಯಾಯಾಲಯವು ದಂಡ ವಿಧಿಸಿದೆ. ಇದು ಮುಂದಿನ ಅಧ್ಯಕ್ಷಿಯ ಚುನಾವನೆಗೆ ತಮ್ಮ ಉಮೇದುವಾರಿಕೆ ಘೋಷಿಸಿಕೊಂಡಿರುವ ಟ್ರಂಪ್ ಗೆ ಭಾರಿ ಹಿನ್ನಡೆ ತಂದೊಡ್ಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ವ್ಯವಹಾರದಲ್ಲಿನ ಹಣಕಾಸಿನ ಮೂಲಗಳ ಬಗ್ಗೆ ಅಸಮರ್ಪಕ ಮಾಹಿತಿ, ಅಪಾರ್ಟ್‌ಮೆಂಟ್‌ಗಳು ಮತ್ತು ಐಷಾರಾಮಿ ಕಾರುಗಳಂತಹ ಅದ್ದೂರಿ ಸವಲತ್ತುಗಳ ಮೇಲಿನ ತೆರಿಗೆಗಳನ್ನು ತಪ್ಪಿಸಿಕೊಳ್ಳಲು ಅಧಿಕಾರಿಗಳಿಗೆ ಸಹಾಯ ಮಾಡಿದ್ದಕ್ಕಾಗಿ ಡೊನಾಲ್ಡ್ ಟ್ರಂಪ್ ಒಡೆತನದ ಕಂಪನಿಯು ಶಿಕ್ಷೆಗೊಳಗಾಗಿವೆ.
ಇತ್ತೀಚೆಗೆ ತಾನು ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿರುವ ಟ್ರಂಪ್, ತನ್ನ ಕಂಪನಿಯ ವಿರುದ್ಧದ ಪ್ರಕರಣವು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಜೊತೆಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ