ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡದ ಲಾಡ್ಜ್ ಒಂದರಲ್ಲಿ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಳವಾರ ನವಲಗುಂಡ ತಾಲೂಕಿನ ಬೆಳವಟಗಿ ಗ್ರಾಮದ ಯುವಕ ಕುಮಾರ ಹಾಗೂ ಆತನ ಸ್ನೇಹಿತೆ ದೀಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಧ್ಯಾಹ್ನ ಲಾಡ್ಜ್ಗೆ ಇವರಿಬ್ಬರು ತೆರಳಿದ್ದರು. ಪರಿಚಯಸ್ತರ ಮೂಲಕ ರೂಂ ಪಡೆದಿದ್ದರು ಎನ್ನಲಾಗಿದೆ. ಸಂಜೆ ವೇಳೆಗೆ ಇಬ್ಬರೂ ಮೃತಪಟ್ಟಿದ್ದಾರೆ. ಪ್ರೇಮದಲ್ಲಿ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.