Monday, December 1, 2025

ಮುಖ್ಯಮಂತ್ರಿ ಆಗಬೇಕೆಂದು ಏಳೆಂಟು ಜನರಿಂದ ಪೈಪೋಟಿ: ಬಿ.ವೈ.ವಿಜಯೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷದಲ್ಲಿ ಏಳೆಂಟು ಜನ ಹಿರಿಯ ಶಾಸಕರು, ಸಚಿವರು ಹೇಗಾದರೂ ಮುಖ್ಯಮಂತ್ರಿ ಆಗಬೇಕೆಂದು ಪೈಪೋಟಿಗೆ ಇಳಿದಿದ್ದಾರೆ ಎಂದುಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪೈಪೋಟಿಯಿಂದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸಿದ್ದರಾಮಯ್ಯರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬಗ್ಗೆ ಅಸಡ್ಡೆ ತೋರುತ್ತಾ ಬಂದಿದೆ. ಕಿಸಾನ್ ಸಮ್ಮಾನ್ ಯೋಜನೆಯನ್ನು ಪ್ರಧಾನಿಯವರು ಜಾರಿಗೊಳಿಸಿದ್ದರು. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ 4 ಸಾವಿರ ರೂ. ಹೆಚ್ಚುವರಿಯಾಗಿ ನೀಡಿತ್ತು. ಅದಕ್ಕೆ ಕಲ್ಲುಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಬಸವರಾಜ ಬೊಮ್ಮಾಯಿಯವರು ರೈತ ವಿದ್ಯಾನಿಧಿ ಜಾರಿಗೊಳಿಸಿದ್ದರು. ಅದಕ್ಕೂ ಇವರು ಕಲ್ಲು ಹಾಕಿದರು ಎಂದು ದೂರಿದರು.

error: Content is protected !!