ಚುನಾವಣಾ ಫಲಿತಾಂಶ ನೋಡಿ ನಾನು ಭಾವುಕನಾದೆ: ಗುಜರಾತ್ ಗೆಲುವಿನ ಖುಷಿ ಹಂಚಿಕೊಂಡ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿಗೆ ಪ್ರಧಾನಿ ಮೋದಿ ಅವರು ಗುಜರಾತ್‌ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಹೇಳಿದ್ದಾರೆ.

ಈ ಇದೇ ವೇಳೆ ಪಕ್ಷದ ಕಾರ್ಯಕರ್ತರನ್ನು ಶ್ಲಾಘಿಸಿದ ಮೋದಿ, ಪ್ರತಿಯೊಬ್ಬರೂ ಚಾಂಪಿಯನ್ ಆಗಿದ್ದಾರೆ. ಕಠಿಣ ಪರಿಶ್ರಮಿಗಳಾದ ಗುಜರಾತಿನ ಎಲ್ಲ ಬಿಜೆಪಿ ಕಾರ್ಯಕರ್ತರಲ್ಲಿ ನಾನು ನೀವು ಪ್ರತಿಯೊಬ್ಬರೂ ಚಾಂಪಿಯನ್! ಎಂದು ಹೇಳಬಯಸುತ್ತೇನೆ. ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!