ಹೊಸದಿಗಂತ ಡಿಜಿಟಲ್ ಡೆಸ್ಕ್
ಮಾಂಡೌಸ್ ಚಂಡಮಾರುತ ಭೀತಿ ಕರ್ನಾಟಕದ ಮೇಲೂ ಬೀರಲಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ಐಎಂಡಿ ನೀಡಿದೆ.
ಈಗಾಗಲೇ ತಮಿಳುನಾಡು, ಪುದುಚೆರಿ, ಆಂಧ್ರ ಪ್ರದೇಶದ ಕರಾವಳಿಯಲ್ಲಿ ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ನಾಲ್ಕು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದೀಗ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜಿನಿಂದ ಕೂಡಿರಲಿದೆ.