ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪುರಸಭೆಯ ಈಜುಕೊಳದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು, ಈಜುಕೊಳದಲ್ಲಿ ಅಭ್ಯಾಸ ನಡೆಸುತ್ತಿದ್ದ 10 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ.
ಹಳೆಯ ಉಪಕರಣಗಳು ಹಾಗೂ ಹಳೆಯ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿತ್ತು ಎನ್ನಲಾಗಿದೆ. ಶೀಘ್ರವೇ ಅದನ್ನು ಸರಿಪಡಿಸಲಾಗಿದೆ. ಈಜುಕೊಳದಲ್ಲಿದ್ದ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಇದೀಗ ಸ್ಥಿರವಾಗಿದೆ ಎನ್ನಲಾಗಿದೆ.
ಎಲ್ಲಾ ಮಕ್ಕಳು 50 ಮೀಟರ್ ಕೊಳದಲ್ಲಿ ಈಜುತ್ತಿದ್ದರು. 25 ಮೀಟರ್ ಕೊಳದ ಟ್ಯಾಂಕರ್ನಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಡಿ. 11ರಂದು ಏಲೂರಿನಲ್ಲಿ ನಡೆಯಲಿರುವ ಸ್ಪರ್ಧೆಗಳಿಗೆ ಮಕ್ಕಳು ಈಜಲು ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಅಸ್ವಸ್ಥಗೊಂಡ 10 ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.