ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಿತ್ವಾ ಚಂಡಮಾರುತದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಹೀಗಾಗಿ ತಮಿಳುನಾಡಿನ ಚೆನ್ನೈ ಮತ್ತು ತಿರುವಲ್ಲೂರುಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಚೆನ್ನೈ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ನಾಳೆ (ಡಿಸೆಂಬರ್ 2) ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಘೋಷಿಸಿದೆ.
ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ ಮತ್ತು ತಿರುವಳ್ಳೂರಿನಲ್ಲಿ ಮಂಗಳವಾರ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ ಮತ್ತು ಹತ್ತಿರದ ಜಿಲ್ಲೆಗಳು ಮಂಗಳವಾರ ಮತ್ತೆ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. .
ನೈಋತ್ಯ ಬಂಗಾಳ ಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಕಳೆದ 6 ಗಂಟೆಗಳಲ್ಲಿ ಗಂಟೆಗೆ 3 ಕಿ.ಮೀ ವೇಗದಲ್ಲಿ ವಾಯುಭಾರ ಕುಸಿತವು ನಿಧಾನವಾಗಿ ಉತ್ತರದ ಕಡೆಗೆ ಚಲಿಸಿದೆ. ಚೆನ್ನೈನಿಂದ ಸುಮಾರು 50 ಕಿ.ಮೀ, ಪುದುಚೇರಿ ಬಳಿ 140 ಕಿ.ಮೀ, ಕಡಲೂರಿನಿಂದ 160 ಕಿ.ಮೀ ಮತ್ತು ನೆಲ್ಲೂರು ಬಳಿ 170 ಕಿ.ಮೀ ದೂರದಲ್ಲಿ ಚಂಡಮಾರುತ ಚಲಿಸಿದೆ.
ಇದಲ್ಲದೆ, ಇಂದು ಸಂಜೆಯಿಂದ ರಾತ್ರಿಯವರೆಗೆ ಚೆನ್ನೈ ಮತ್ತು ತಿರುವಲ್ಲೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಮಳೆ ಮುಂದುವರಿಯುವ ನಿರೀಕ್ಷೆಯಿರುವುದರಿಂದ ನಾಳೆ ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ ಮತ್ತು ತಿರುವಲ್ಲೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

