ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಮಾಚಲ ಪ್ರದೇಶದಲ್ಲಿ ಸರಕಾರ ನಡೆಸಲು ಕಾಂಗ್ರೆಸ್ ನಾಯಕರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿದ್ದಾರೆ.
ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ, ಪಕ್ಷದ ವೀಕ್ಷಕರಾದ ಭೂಪೇಶ್ ಬಘೇಲ್ ಮತ್ತು ಬಿಎಸ್ ಹೂಡಾ ಅವರು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು.
68 ಸದಸ್ಯ ಬಲದ ರಾಜ್ಯ ಅಸೆಂಬ್ಲಿಯಲ್ಲಿ ಕಾಂಗ್ರೆಸ್ 40 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದೆ.