ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ಇಬ್ಬರು ಬಡ ಹಾಲಕ್ಕಿ ಮಹಿಳೆಯರು ಪದ್ಮಶ್ರೀ ಪುರಸ್ಕಾರ ಪಡೆದ ಸಾಧನೆ ಪ್ರತಿಯೊಬ್ಬರೂ ಹೆಮ್ಮೆ ಪಡುವಂತದ್ದು ವೃಕ್ಷಮಾತೆ ತುಳಸಜ್ಜಿ ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಗುರುತಿಸಿ ಅವರನ್ನು ಗೌರವಿಸಿದ್ದಾರೆ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ತಾಲೂಕಿನ ಅಗಸೂರು ಗ್ರಾಮ ಪಂಚಾಯಿತ ವ್ಯಾಪ್ತಿಯ ಹೊನ್ನಳ್ಳಿಯಲ್ಲಿ ಪದ್ಮಶ್ರೀ ತುಳಸಿ ಗೌಡ ಅವರ ಮನೆಗೆ ಹೋಗುವ ರಸ್ತೆಗೆ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ತುಳಸಜ್ಜಿ ಮನೆಗೆ ತೆರಳಲು ಮಳೆಗಾಲದ ಸಂದರ್ಭದಲ್ಲಿ ತೀವ್ರ ಸಮಸ್ಯೆ ಎದುರಾಗುತ್ತಿರುವುದನ್ನು
ಕಂಡು ಕಾಲು ಸಂಕ ನಿರ್ಮಾಣ ಮಾಡಿಕೊಡುವ ಭರವಸೆಯಂತೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಪದ್ಮಶ್ರೀ ತುಳಸಿ ಗೌಡ ಮಾತನಾಡಿ ಕಾಲುಸಂಕ ನಿರ್ಮಾಣ ಕಾಮಗಾರಿ ಕುರಿತು ಸಂತಸ ವ್ಯಕ್ತಪಡಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಜಿ.ಪಂ ಮಾಜಿ ಸದಸ್ಯ ಜಗದೀಶ ನಾಯಕ ಮೊಗಟಾ,
ಅಗಸೂರು ಗ್ರಾಮ ಪಂಚಾಯಿತ ಸದಸ್ಯರು ಉಪಸ್ಥಿತರಿದ್ದರು.