ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಗಡಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ. ಈ ಸಮಸ್ಯೆಯ ಇತ್ಯರ್ಥ ಕುರಿತಂತೆ ಡಿ.೧೪ರಂದು ಕೇಂದ್ರ ಗೃಹ ಸಚಿವರು ಸಭೆ ಕರೆದಿದ್ದು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸಹಜವಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ಕರ್ನಾಟಕದ ಹಿತರಕ್ಷಣೆಗೆ ನಾವು ನೂರಕ್ಕೆ ನೂರು ಬದ್ಧರಾಗಿದ್ದೇವೆ. ಅದೇ ರೀತಿ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಯನ್ನೂ ಮಾಡುತ್ತೇವೆ ಎಂದರು.
ಶಿರಾಡಿ ರಸ್ತೆ ಹಾಳಾಗಿದ್ದು, ಈ ನಿಟ್ಟಿನಲ್ಲಿ ವಾರದೊಳಗೆ ವಿಶೇಷ ಸಭೆ ಕರೆದು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.