ಎಂಸಿಡಿ ಚುನಾವಣೆಯಲ್ಲಿ ಸೋಲಿನ ಬೆನ್ನಲ್ಲೇ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಭಾನುವಾರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ದೆಹಲಿ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. “ಎಂಸಿಡಿಯಲ್ಲಿನ ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ನನ್ನ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಿದ್ದೇನೆ. ಅದನ್ನು ಅಂಗೀಕರಿಸಲಾಗಿದೆ” ಎಂದು ಗುಪ್ತಾ ತಿಳಿಸಿದ್ದಾರೆ.
ಬುಧವಾರದಂದು ಪ್ರಕಟವಾದ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ನಂತರ ದೆಹಲಿ ಬಿಜೆಪಿಯ ನಾಯಕತ್ವದಲ್ಲಿ ಬದಲಾವಣೆಯ ಕೂಗು ಕೇಳಿಬಂದಿತ್ತು. ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳೊಂದಿಗೆ ಜಯಗಳಿಸಿದ್ದು, ಪ್ರತಿಷ್ಠಿತ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು ಮತ್ತು ಬಿಜೆಪಿಯನ್ನು 104 ಸ್ಥಾನಗಳಿಗೆ ಸೀಮಿತಗೊಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!