ಕಲಾವಿದರ ಬಳಿ ತೆರಳಿ ಡೋಲ್ ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರದ ನಾಗ್ಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಡೋಲ್ ಬಾರಿಸಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ವೇಳೆ ಉತ್ಸುಕರಾದ ಮೋದಿ, ಕಲಾವಿದರ ಗುಂಪನ್ನು ಸೇರಿ ತಾವು ಕೂಡ ಡೋಲ್ ಬಾರಿಸಿ ಸಂಭ್ರಮಿಸಿದರು.

ಈ ಕುರಿತು ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ವಿಡಿಯೊ ಹಂಚಿಕೊಂಡಿದ್ದಾರೆ. ‘ಮಹಾರಾಷ್ಟ್ರದ ನಾಗ್ಪುರದಲ್ಲಿ ಸಾಂಪ್ರದಾಯಿಕ ಸ್ವಾಗತ’ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೊ ಶೇರ್ ಮಾಡಲಾಗಿದೆ.

ನಾಗ್ಪುರ ಮತ್ತು ಬಿಲಾಸ್‌ಪುರ ನಡುವೆ ಇಂದು (ಭಾನುವಾರ) ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.ನಾಗ್ಪುರ ಮೆಟ್ರೋ ಮೊದಲ ಹಂತದ ಕಾಮಗಾರಿಗೂ ಚಾಲನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!