ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಶಾಲಾ ಬಸ್ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಕೆಲ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಯ್ ಗಢ್ ಜಿಲ್ಲೆಯ ಕೊಪೋಲಿ ಎಂಬಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಹೆದ್ದಾರಿ ಪಕ್ಕದ ಕಣಿವೆಗೆ ಬಸ್ ಉರುಳಿದ ವೇಳೆ ಬಸ್ನಲ್ಲಿ 48 ವಿದ್ಯಾರ್ಥಿಗಳಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೆ, ಕೆಲವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತೋರುತ್ತದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.