ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಮತ್ತು ಜಿಮ್ ತರಬೇತಿದಾರು ಪಾನಿಪುರಿ ಕಿಟ್ಟಿ ನಡುವೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ ಪಡೆದಿದ್ದು, ಹೈಕೋರ್ಟ್ ಸೂಚನೆಯ ಮೇರೆಗೆ ದುನಿಯಾ ವಿಜಯ್ ಮಗನ ಮೇಲೆ ಹಲ್ಲೆ ಮಾಡಿದ್ದ ಪಾನಿಪುರಿ ಕಿಟ್ಟಿ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.
2018ರಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ದೇಹದಾರ್ಢ್ಯ ಸ್ಪರ್ಧೆ ನಡೆದಿತ್ತು. ಈ ಸಂದರ್ಭ ಪಾನಿಪುರಿ ಕಿಟ್ಟಿ ಟೀಂಗೂ ಹಾಗೂ ದುನಿಯಾ ವಿಜಯ್ ಟೀಂ ಗೂ ಗಲಾಟೆ ನಡೆದಿತ್ತು. ಈ ವೇಳೆ ಸ್ಪರ್ಧೆ ಮಾಡಿದ್ದ ಪಾನಿಪುರಿ ಕಿಟ್ಟಿಯ ಸಹೋದರ ಮಾರುತಿ ಗೌಡನನ್ನು ಗಲಾಟೆ ನಂತರ ದುನಿಯಾ ವಿಜಯ್ ಕಾರಿನಲ್ಲಿ ಕರೆದುಕೊಂಡು ಹೋಗಿ, ಹಿಗ್ಗಮುಗ್ಗ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು. ನಂತರ ಮಧ್ಯರಾತ್ರಿ ಪೊಲೀಸರ ಕರೆ ಮೇರೆಗೆ ವಾಪಸ್ ಕರೆತಂದಿದ್ದೂ ಬಿಟ್ಟಿದ್ದರು ಎಂದು ಹೇಳಲಾಗಿತ್ತು.
ಈ ಗಲಾಟೆ ನಂತರ ಎರಡೂ ಕಡೆ ಕೌಂಟರ್ ಕಂಪ್ಲೆಂಟ್ ದಾಖಲಾಗಿತ್ತು. ನನ್ನ ಮಗ ಸಾಮ್ರಾಟ್ ನಿಗೆ ಬೈದು ಬೆದರಿಕೆ ಹಾಕಿದ್ರು ಎಂದು ವಿಜಯ್ ದೂರು ನೀಡಿದ್ದರು.
ಸದ್ಯ ವಿಜಯ್ ಮೇಲಿರುವ ಕೇಸ್ ನಡೀತಾ ಇದೆ. ಪಾನಿಪುರಿ ಕಿಟ್ಟಿಮೇಲೆ ನೀಡಿದ್ದ ದೂರು ಸಾಕ್ಷ್ಯಗಳ ಕೊರೆತೆಯಿಂದಾಗಿ ಕ್ಲೋಸ್ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು.ಇದೀಗ ನ್ಯಾಯಾಲಯವು ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಎಫ್.ಐ.ಆರ್ ಮಾಡುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸೂಚನೆ ನೀಡಿತ್ತು.