Bangladesh vs India | ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌! ಹೀಗಿದೆ ಪ್ಲೇಯಿಂಗ್‌ 11

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಗ್ಲಾದೇಶದ ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್‌ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಭಾರತ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ಸೀಮರ್‌ಗಳನ್ನು ಕಣಕ್ಕಿಳಿಸಿದ್ದರಿಂದ ಕುಲ್ದೀಪ್ ಯಾದವ್ ಅವರು ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆದಿದ್ದಾರೆ. ಅಶ್ವಿನ್‌ ಮತ್ತು ಅಕ್ಷರ್‌ ಉಳಿದ ಇಬ್ಬರು ಸ್ಪಿನ್ನರ್‌ ಗಳು. ಉಮೇಶ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ರೂಪದಲ್ಲಿ ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ಏಕದಿನದಿಂದ ಹೊರಗುಳಿದಿದ್ದ ರಿಷಬ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿಗೆ ಮರಳಿದೆ.. ಮತ್ತೊಂದೆಡೆ, ಬಾಂಗ್ಲಾದೇಶವು ಸಹ ಇದೇ ಮಾದರಿಯ ತಂಡವನ್ನು ಆಯ್ಕೆ ಮಾಡಿದೆ. ಏಳು ಬ್ಯಾಟರ್‌ ಗಳು, ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ಸೀಮರ್‌ ಗಳೊಂದಿಗೆ ಕಣಕ್ಕಿಳಿದಿದೆ.
ಭಾರತ ಮತ್ತು ಬಾಂಗ್ಲಾದೇಶ ಈ ಮೂಲಕ 12ನೇ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗಿವೆ. ಈ ಮುನ್ನ ಆಡಿದ 11 ಟೆಸ್ಟ್‌ಗಳಲ್ಲಿ ಭಾರತ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 2 ಟೆಸ್ಟ್ ಪಂದ್ಯಗಳು ಡ್ರಾ ಆಗಿದ್ದವು. ಒಂದರಲ್ಲಿ ಬಾಂಗ್ಲಾ ಗೆದ್ದಿತ್ತು.

ಬಾಂಗ್ಲಾದೇಶ (ಪ್ಲೇಯಿಂಗ್ XI):
ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ಸಿ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್(ಡಬ್ಲ್ಯೂ), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ಎಬಾಡೋತ್ ಹೊಸೈನ್
ಭಾರತ (ಪ್ಲೇಯಿಂಗ್ XI):
ಶುಭಮನ್ ಗಿಲ್, ಕೆಎಲ್ ರಾಹುಲ್(ಸಿ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ಡಬ್ಲ್ಯೂ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!