ಹೊಸದಿಗಂತ ಡಿಜಿಟಲ್ ಡೆಸ್ಕ್
ಇನ್ಫೋಸಿಸ್ನ ಸಂಸ್ಥೆಯ 40ನೇ ವರ್ಷದ ಸಂಭ್ರಮಾಚರಣೆ ಯಲ್ಲಿ ಸುಧಾಮೂರ್ತಿಯವರು ಶ್ರೇಯಾ ಘೋಷಾಲ್ ಅವರ ಹಾಡಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಇನ್ಫೋಸಿಸ್ ಸಂಸ್ಥೆಯ 40 ನೇ ವರ್ಷದ ಸಂಭ್ರಮಾಚರಣೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉದ್ಯೋಗಿಗಳು ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು.
Omg..!!!🙏🏻 legend's Sudhamurthy amma & Shreyaghoshal di
. #SudhaMurty mam @shreyaghoshal #Infosys #ShreyaGhoshal #Legends
.
(Sudha amma dances her heart out on 'Barso Re Megha' with shreya di💃🏻🔥) pic.twitter.com/MmtT1CvZtt— 💕𝑺𝒉𝒓𝒆𝒚𝒂_𝑺𝒖𝒔𝒉💕 (@Sush36068856) December 15, 2022
ಈ ವೇಳೆ ಗಾಯಕಿ ಶ್ರೇಯಾ ಘೋಷಾಲ್ ಹಾಡಿಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಬಹಳ ಉತ್ಸಾಹದಿಂದ ಹೆಜ್ಜೆ ಹಾಕಿದರು.
ಗಾಯಕಿ ಶ್ರೇಯಾ ಘೋಷಲ್ ಅವರ ಫ್ಯಾನ್ ಪೇಜ್ನಿಂದ ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. 51 ಸೆಕೆಂಡ್ಗಳ ಈ ವಿಡಿಯೋ ಟ್ವಿಟ್ಟರ್ನಲ್ಲಿ ಪೋಸ್ಟ್ ಆದ ಸ್ವಲ್ಪ ಹೊತ್ತಿನಲ್ಲೇ ಸಾವಿರಾರು ಜನ ವೀಕ್ಷಿಸಿದ್ದಾರೆ.