ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
WEATHER | ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

