January21, 2026
Wednesday, January 21, 2026
spot_img

ಇಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ ಹಾಗೂ ಯತಿಪೂಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ಪೇಸ್, ಜ್ಞಾನನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಫೋರ್ಟ್ಸ್‌ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 1:15ಕ್ಕೆ ನಗರದ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್‌ರವರ ಭೇಟಿ ಮಾಡಿ, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Must Read