ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ವಿಮಾನ ನಿಲ್ದಾಣ ಅಭಿವೃದ್ಧಿಗೆ ನೀಡಲಾದ ಆಶ್ರಯ ಯೋಜನೆ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಜ. 1 ರಂದು ಜಿಲ್ಲಾಧಿಕಾರಿ ಕೈಗೊಳ್ಳುವ ಕ್ರಮ ನೋಡಿಕೊಂಡು ಹೋರಾಟ ರೂಪರೇಷ ಹಾಕಿಕೊಳ್ಳಲಾಗುತ್ತದೆ ಎಂದು ಇಲ್ಲಿಯ ಧಾರವಾಡ ಜಿಲ್ಲಾ ಆಶ್ರಯ ಮನೆ ಬಡಾವಣೆಗಳ ವಿವಿಧ ಸಂಘ/ ಸಂಸ್ಥೆಗಳ ಒಕ್ಕೂಟ ಜಿಲ್ಲಾಧ್ಯಕ್ಷ ಪ್ರೇಮನಾಥ ಚಿಕ್ಕತುಂಬಳ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶ್ರಯ ಯೋಜನೆ ವಂಚಿತ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಡಿ. 18 ರಿಂದ 21 ರ ವರೆಗೆ ಶಾಸಕ ಅರವಿಂದ ಬೆಲ್ಲದ ಅವರ ಮನೆಯ ಮುಂದೆ ಧರಣಿ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಭಾನುವಾರ ಸಿಎಂ ಅವರಿಗೆ ಮನವಿ ಸಲ್ಲಿಸಿದಾಗ ಜಿಲ್ಲಾಧಿಕಾರಿಗಳು ತಕ್ಷಣ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಸೂಚಿಸಿದ್ದಾರೆ. ಆದರಿಂದ ಜಿಲ್ಲಾಧಿಕಾರಿಗಳ ನಡೆಯನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಾಗುವುದು ಎಂದರು.