Wednesday, December 3, 2025

ಚಳಿಗಾಲ ಅಧಿವೇಶನ| ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆ: ಬೆಳಗಾವಿಯಲ್ಲಿ ವ್ಯಾಪಕ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಹಿನ್ನೆಲೆ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್‌ ಆಗಿವೆ.

ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ.

ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅಚಾತುರ್ಯ, ಅವಘಡ ಸಂಭವಿಸದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

error: Content is protected !!