ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನಾಳೆಯಿಂದ ದೇಶದಲ್ಲಿ 100 ದಿನಗಳ ಜಾಗೃತಿ ಅಭಿಯಾನವನ್ನು ಆರಂಭಿಸಲಿದೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ, ರಾಜ್ಯ ಸಚಿವೆ ಶ್ರೀಮತಿ ಸಾವಿತ್ರಿ ಠಾಕೂರ್ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಈ ರಾಷ್ಟ್ರೀಯ ಅಭಿಯಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಂಚಾಯತಿ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಚಿವಾಲಯಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಕಾರ್ಯಗತಗೊಳಿಸಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಈ ಅಭಿಯಾನ ನಡೆಯಲಿದ್ದು ನಾಗರಿಕರು, ಸಂಸ್ಥೆಗಳು ಮತ್ತು ಸಮುದಾಯ ಮುಖಂಡರು ಈ ಆಂದೋಲನಕ್ಕೆ ಕೈ ಜೋಡಿಸಬೇಕೆಂದು ಸಚಿವಾಲಯ ಮನವಿ ಮಾಡಿದೆ.
ಬಾಲ್ಯ ವಿವಾಹ ತಡೆಗಟ್ಟಲು 100 ದಿನಗಳ ಜಾಗೃತಿ ಅಭಿಯಾನ

