ಹೊಸದಿಗಂತ ಡಿಜಿಟಲ್ ಡೆಸ್ಕ್
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಜೀಮ್ ಸೇಥಿಯನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
2021ರ ಸೆಪ್ಟೆಂಬರ್ನಲ್ಲಿ ರಮೀಜ್ ರಾಜಾ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಆದರೆ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸಮಿತಿಯ ಪ್ರಮುಖ ಸದಸ್ಯ, ಪ್ರಧಾನಿ ಶಹಬಾಜ್ ಶರೀಫ್ ನೇತೃತ್ವದಲ್ಲಿ ಸಭೆ ನಡೆಸಿ ನಜೀಮ್ ಸೇಥಿಯನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ನಜೀಮ್ ಸೇಥಿ ಈ ಹಿಂದೆ ಪಾಕಿಸ್ತಾನ ಕ್ರಿಕಟ್ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆದರೆ ಇಮ್ರಾನ್ ಖಾನ್ ಪಾಕಿಸ್ತಾನ ಪ್ರಧಾನಿಯಾಗಿದ ವೇಳೆ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.