ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದಿಂದ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿನಿಯರು ಸೇರಿ ಏಳು ಮಂದಿಗೆ ಗಂಭೀರ ಗಾಯಗಳಾಗಿವೆ.
ಬೇಲೂರು ತಾಲೂಕಿನ ನಿಡುಗೋಡು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಒಟ್ಟು 71 ಮಂದಿ ಇದ್ದರು. ನಿಡುಗೋಡು ಗ್ರಾಮದ ಬಳಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡವರನ್ನು ಬೇಲೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.