ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಯ್ಪುರದಲ್ಲಿ ರುತುರಾಜ್ ಗಾಯಕ್ವಾಡ್ ತಮ್ಮ ಚೊಚ್ಚಲ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.
ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೇವಲ ಒಂದಂಕಿಗೆ ಸುಸ್ತಾಗಿದ್ದ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್, ರಾಯ್ಪುರದಲ್ಲಿ ಲಯಬದ್ಧವಾಗಿ ಬ್ಯಾಟಿಂಗ್ ನಡೆಸಿ ಚೊಚ್ಚಲ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದರು.
52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು 77 ಎಸೆತಗಳಲ್ಲಿ ತಮ್ಮ ಚೊಚ್ಚಲ ಶತಕದ ಗಡಿ ದಾಟಿದರು.

