March 14, 2026
Saturday, March 14, 2026
spot_img

ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು.

ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !