January21, 2026
Wednesday, January 21, 2026
spot_img

ಬಿಸಿಲು-ಮಳೆ ಕಣ್ಣಾಮುಚ್ಚಾಲೆ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವರ್ಷಧಾರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆ, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಉತ್ತರ ಒಳನಾಡು ಭಾಗದಲ್ಲಿ ಮಾತ್ರ ಒಣ ಹವೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಸಣ್ಣ ಪ್ರಮಾಣದ ಮಳೆ ಅಥವಾ ಮೋಡಕವಿದ ವಾತಾವರಣ ಕಂಡುಬರಲಿದೆ.

ಮಳೆಯಾಗುವ ಜಿಲ್ಲೆಗಳು:

ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ.

ಕರಾವಳಿ: ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರ ನಿರೀಕ್ಷಿಸಲಾಗಿದೆ. ಅದರಲ್ಲೂ, ಉಡುಪಿ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಒಣ ಹವೆ ಇರಲಿರುವ ಜಿಲ್ಲೆಗಳು:
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ಶುಷ್ಕ ವಾತಾವರಣ ಇರಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಬೆಂಗಳೂರಿನ ಹವಾಮಾನ ವಿವರ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ಸಾಧಾರಣ ಮಳೆ ಅಥವಾ ಮೋಡಕವಿದ ವಾತಾವರಣದೊಂದಿಗೆ ದಿನ ಆರಂಭವಾಗಲಿದೆ. ಬೆಳಗ್ಗಿನ ಜಾವದ ವೇಳೆ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

Must Read