ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಚರ್ಚೆಗೆ ಬಂದಿದ್ದು, ನಮ್ಮ ಸರ್ಕಾರ ಒಂದೇ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ.
ಪ್ರತಿ ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಜನರಿಗೆ ನ್ಯಾಯ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲಿದೆ ಎಂದರು.
ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್, ಮೊದಲ ವಾರದಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ವ್ಯವಹಾರ ಸಲಹಾ ಸಮಿತಿಯಲ್ಲಿ ನಿರ್ಧರಿಸಿದರೂ ಸರ್ಕಾರ ಗಡಿ ವಿವಾದದ ನಿರ್ಣಯವನ್ನು ಏಕೆ ಮಂಡಿಸಿಲ್ಲ ಎಂದು ಪ್ರಶ್ನಿಸಿದರು.