ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಹಾವಳಿಯಿಂದ ಚೀನಾ ತತ್ತರಿಸಿದ್ದು, ಇದೇ ಮೊದಲ ಬಾರಿಗೆ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಮಾತನಾಡಿದ್ದಾರೆ. ಚೀನಾದಲ್ಲಿ ಮತ್ತೊಮ್ಮೆ ಕೋವಿಡ್ ಸೋಂಕು ತೀವ್ರಗೊಂಡಿದ್ದು, ಆಸ್ಪತ್ರೆಗಳು ಹಾಗೂ ಸ್ಮಶಾನಗಳು ಭರ್ತಿಯಾಗಿರುವ ಪರಿಸ್ಥಿತಿ ಕಾಣಿಸುತ್ತಿದೆ.
ಜನರ ಜೀವನ ಮುಖ್ಯ ಅವರನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ತಡೆಯಲು ಹೊಸ ಟಾಸ್ಕ್ಗಳನ್ನು ಕೈಗೆತ್ತಿಕೊಳ್ಳುತ್ತೇವೆ. ಹೆಚ್ಚು ಮಂದಿಯನ್ನು ತಲುಪಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಜನರ ಜೀವನವನ್ನು ಪರಿಣಾಮಕಾರಿಯಾಗಿ ರಕ್ಷಿಸಬೇಕಿದೆ ಎಂದು ಷಿ ಜಿನ್ಪಿಂಗ್ ಹೇಳಿದ್ದಾರೆ.