ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸತತ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಟಿ20 ಕ್ರಿಕೆಟ್ನಿಂದ ತಾತ್ಕಾಲಿಕ ಬ್ರೇಕ್ ಪಡೆದಿದ್ದಾರೆ . ಈ ಮೂಲಕ ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕೊಹ್ಲಿ ಅಲಭ್ಯರಾಗುತ್ತಿರುವುದು ಬಹುತೇಕ ಖಚಿತ ಎನ್ನುವಂತಿದೆ.
ಟಿ20 ವಿಶ್ವ ಕಪ್ ಸೋಲಿನ ಬಳಿಕ ಭಾರತ ಕ್ರಿಕೆಟ್ ತಂಡಹಿರಿಯ ಆಟಗಾರರನ್ನು ಚುಟುಕು ಮಾದರಿಯ ಕ್ರಿಕೆಟ್ನಿಂದ ಕೈ ಬಿಟ್ಟು ಯುವ ಆಟಗಾರರಿಗೆ ಹೆಚ್ಚು ಮಣೆ ಹಾಕುವ ಚಿಂತನೆಯೂ ನಡೆಸಿದೆ. ಈ ಮಧ್ಯೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಿಂದ ತಾತ್ಕಾಲಿಕ ಬ್ರೇಕ್ ಪಡೆಯಲು ನಿರ್ಧರಿಸಿದ್ದು ಹಲವು ಅನುಮಾನಗಳಿಗೆ ಎಡೆಮಾಡಿದಂತಿದೆ.
ಒಂದೊಮ್ಮೆ ಕೊಹ್ಲಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದು ಅವರು ಟಿ20 ಕ್ರಿಕೆಟ್ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.