ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೊರೋನಾ ನಾಲ್ಕನೇ ಅಲೆ ಹೆಚ್ಚು ಬಾಧಿಸುವುದಿಲ್ಲ. ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಕೊರೋನಾ ಬರುತ್ತದೆ, ಹೋಗುತ್ತದೆ ಎಂದು ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಕೋಡಿಮಠದ ಶ್ರೀ, ಕೊರೋನಾ ಬಗ್ಗೆ ಜನರು ಆತಂಕಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರಲ್ಲದೆ, ಸಾವು-ನೋವು ಸಂಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಕರ್ನಾಟಕ ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ ಸ್ವಾಮೀಜಿ, ಪಕ್ಷಗಳು ಒಡೆಯುತ್ತವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅದು ಇದೀಗ ನಿಜವಾಗುತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಿದರು.
ಆದ್ರೆ ಈ ಕ್ಷಣ ಒಲೆ ಹೊತ್ತಿ ಉರಿದರೆ ಅಡುಗೆ ಆಗುತ್ತೆ, ಭೂಮಿ ಹೊತ್ತಿ ಉರಿದರೆ ಏನಾಗಬಹುದು? ಅಂಥ ಪ್ರಸಂಗದ ಬಗ್ಗೆ ಮುಂದೆ ಭವಿಷ್ಯ ನುಡಿಯುತ್ತೇನೆ ಎಂದು ಹೇಳಿಕೆ ನೀಡಿದ್ದು, ಜನರಲ್ಲಿ ಆಲೋಚನೆ ಶುರುಮಾಡಿದೆ .