ಹೊಸದಿಗಂತ ಡಿಜಿಟಲ್ ಡೆಸ್ಕ್
ಮಂಗಳವಾರ ರಾತ್ರಿ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೀಲನಪುರದಲ್ಲಿ ಮತ್ತೊಂದು ವಯಸ್ಕ ಗಂಡು ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದಿದ್ದಾರೆ.
ಏಳರಿಂದ ಎಂಟು ವರ್ಷದ ಚಿರತೆ ಇದಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್ ಕಮಲಾ ತಿಳಿಸಿದ್ದಾರೆ.
ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಪರಶಿವಪ್ಪ ಅವರ ಕೃಷಿ ಜಮೀನಿನಲ್ಲಿ ಬೋನು ಇಟ್ಟಿದ್ದರು. ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ಕಮಲಾ ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ