ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇನ್ನುಮುಂದೆ ಪೌರ ಕಾರ್ಮಿಕರನ್ನು ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಸಿಎಂ ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.
ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನುಮುಂದೆ ಪೌರ ಕಾರ್ಮಿಕರನ್ನು ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂತಹ ವಿಷಯದಲ್ಲಿಯೂ ರಾಜಕಾರಣ ಮಾಡಲಾಗುತ್ತದೆ. ನ್ಯಾಯ ಕೊಡುತ್ತಿರುವವರ ಮೇಲೆ ನಂಬಿಕೆಯಿಟ್ಟು ನಡೆದರೆ ಒಳ್ಳೆಯದಾಗುತ್ತದೆ.ಇನ್ನು ಮುಂದೆ ಪೌರ ಕಾರ್ಮಿಕರು ಎನ್ನದೇ , ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ. ಈ ಹೆಸರು ನಿಮಗೆ ಸ್ವಾಭಿಮಾನ, ಅಸ್ಮಿತೆಯನ್ನು ನೀಡುತ್ತದೆ ಎಂದರು.
ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ ಆರೋಗ್ಯ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ ಕಾನೂನನ್ನು ಬದಲಾಯಿಸಿ, ಈ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಪೌರಕಾರ್ಮಿಕರಿಗೆ ನ್ಯಾಯ ಒದಗಿಸಲಾಗಿದೆ. ಅವರ ಗೌರವಯುತ ಜೀವನ ನಡೆಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.. ಈ ಜಿಲ್ಲೆಯಲ್ಲಿ 309 ಕ್ಲೀನರ್ ಗಳನ್ನು, 1437 ಲೋಡರ್ಸ್ ಗಳನ್ನು ಖಾಯಂಗೊಳಿಸಲಾಗಿದೆ. ಇದೇ ರೀತಿ ಉಳಿದವರನ್ನು ನೇಮಕಾತಿ ಪ್ರಕ್ರಿಯೆ ಕೈಕೊಳ್ಳಲಾಗುವುದು. ಅಲ್ಲಿಯವರೆಗೆ ಅವರ ಸೇವಾದರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ತೀರ್ಮಾನ ಸರ್ಕಾರ ಮಾಡಿದೆ ಎಂದರು.